ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಸಹ ಶಿಕ್ಷಕರು, ಮುಖ್ಯ ಶಿಕ್ಷಕರುಗಳಿಗೆ ಶಾಲಾ ಶಿಕ್ಷಣ ಇಲಾಖೆಯಲ್ಲಿನ ತತ್ಸಮಾನ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ,
ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು, ತಾಂತ್ರಿಕ ಸಹಾಯಕರು, ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ, ಸಹಾಯಕ ಯೋಜನಾ ಸಮನ್ವಯಾಧಿಕಾರಿ, ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ,
ಡಿಸೆಂಬರ್ 30 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಫೆಬ್ರವರಿ 4, 5 ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ.