ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯಮಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ಕೂಡಲೇ ರದ್ದುಪಡಿಸಿ ಮಾತೃ ಇಲಾಖೆಗೆ ಕಳುಹಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಿಕ್ಷಣ ಇಲಾಖೆಯ ಕಚೇರಿ ಸೂಚನೆಗಳಿದ್ದರೂ ಕೂಡ ಅನೇಕ ಜಿಲ್ಲೆಗಳಲ್ಲಿ ನಿಯಮಬಾಹಿರವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ. ವಿವಿಧ ಕೆಲಸಗಳ ಮೇಲೆ ಶಿಕ್ಷಕರನ್ನು ನಿಯೋಜನೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಖಡಕ್ ಎಚ್ಚರಿಕೆ ನೀಡಲಾಗಿದ್ದು, ನಿಯೋಜನೆ ರದ್ದುಪಡಿಸಿ ಮಾತೃ ಇಲಾಖೆಗೆ ಕಳಿಸಲು ಸೂಚಿಸಲಾಗಿದೆ.