
ಬೆಂಗಳೂರು: ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ದಿವ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿದಂತೆ ಬೆಂಗಳೂರು ನಗರದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.