
ಬೆಂಗಳೂರು : ಎಸ್ ಎಸ್ ಎಲ್ ಸಿ ಫೇಲಾದ್ರೂ ವಿದ್ಯಾರ್ಥಿಗಳಿಗೆ ಪಿಯುಸಿ ಪ್ರವೇಶಾತಿ ಸಂಬಂಧ ಇಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ.
ಹೌದು, ವಿದ್ಯಾರ್ಥಿಗಳ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ ಎಲ್ ಸಿ ಅನುತ್ತೀರ್ಣರಾದವರಿಗೂ ಪಿಯುಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ನಿಯಮದ ಬಗ್ಗೆ ಶಿಕ್ಷಕರ ದಿನಾಚರಣೆಯಲ್ಲಿ ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಸೆಪ್ಟೆಂಬರ್ 5 ರ ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಇಂದು ಬೆಂಗಳೂರಿನಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪ ಅವರು ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕನಿಷ್ಟ ಅಂಕ ಪಡೆದ ವಿದ್ಯಾರ್ಥಿ ಕೆಲ ವಿಷಯಗಳಲ್ಲಿ ಫೇಲಾದ್ರೂ ಪಿಯುಸಿ ಪ್ರವೇಶಕ್ಕೆ ಅನುಮತಿ ನೀಡುವ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ.