ಬೆಂಗಳೂರು : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ರಾಜ್ಯ ಸರ್ಕಾರವು ಸುತ್ತೋಲೆ ಹೊರಡಿಸಿದೆ.
ಆದರೆ ಉಲ್ಲೇಖ-2ರಲ್ಲಿ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಉತ್ತರ ಜಿಲ್ಲೆ ಇವರು ಕೆಲವು ಶಾಲೆಯವರು ಹೊರ ರಾಜ್ಯಕ್ಕೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಮನವಿ ಸಲ್ಲಿಸಿರುತ್ತಾರೆ. ಆದರೆ ದಿನಾಂಕ:14/11/2022ರ ಸುತ್ತೋಲೆಯಲ್ಲಿ ಹೊರ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲು ಅನುಮತಿ ನೀಡುವ ಕುರಿತು ಯಾವುದೇ ನಿರ್ದೇಶನವಿರುವುದಿಲ್ಲ, ಆದ್ದರಿಂದ ಈ ಬಗ್ಗೆ ಅನುಮತಿ ನೀಡುವ ಕುರಿತು ಮಾರ್ಗದರ್ಶನ ಕೋರಿರುತ್ತಾರೆ.
ಅದರಂತೆ ಪರಿಶೀಲಿಸಲಾಗಿ, ಪ್ರತೀ ಶೈಕ್ಷಣಿಕ ವರ್ಷ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಉಲ್ಲೇಖ (1) ರ ಸುತ್ತೋಲೆಯಲ್ಲಿನ ಷರತ್ತುಗಳ ಅನ್ವಯ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಿದ ಹಾಗೂ ಉಲ್ಲೇಖಿತ ಸುತ್ತೋಲೆಯ ಷರತ್ತು 8ರ ಜೊತೆಗೆ ಸದರಿ ಶೈಕ್ಷಣಿಕ ಪ್ರವಾಸವನ್ನು ಭಾರತೀಯ ರೈಲ್ವೇಯ ರೈಲುಗಳಲ್ಲಿಯೂ ಹಮ್ಮಿಕೊಳ್ಳಬಹುದು ಎಂದು ತಿಳಿಸಿದೆ. ಉಳಿದಂತೆ ಉಲ್ಲೇಖ (1) ರ ಸುತ್ತೋಲೆಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ ಎಂದು ತಿಳಿಸಿದೆ.