
ಬೆಂಗಳೂರು: ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪ್ರಸ್ತುತ ಶಾಲಾ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ನೀಡುತ್ತಿರುವ ಮೊಟ್ಟೆ ದರ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಲಾಗುವುದು. ಈ ಕುರಿತಾಗಿ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಸದ್ಯ ಪ್ರತಿ ಮೊಟ್ಟೆಗೆ 6 ರೂಪಾಯಿ ದರ ನಿಗದಿ ಮಾಡಲಾಗಿದೆ. ದರ ಹೆಚ್ಚಳಕ್ಕೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯಬೇಕಿದೆ. ಕೆಲವು ಕಡೆ 4.50ರೂ.ನಿಂದ 5.50 ರೂ.ವರೆಗೆ ಮೊಟ್ಟೆ ದೊರೆಯುತ್ತದೆ. ಕೆಲವು ಬಾರಿ ದರ ಹೆಚ್ಚಳವಾಗುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.