alex Certify ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಮತ್ತೊಂದು ಸಿಹಿ ಸುದ್ದಿ: ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಡಿಸೆಂಬರ್ 1 ರಿಂದ ಬೇಯಿಸಿದ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತದೆ.

ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಮಧ್ಯಾಹ್ನದ ಉಪಹಾರ ಯೋಜನೆಯಡಿ ರಾಜ್ಯದ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ ಎಂಟನೇ ತರಗತಿಯ ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.

ಡಿಸೆಂಬರ್ 1 ರಿಂದ ಬಿಸಿಯೂಟದ ಜೊತೆಗೆ ಬೇಯಿಸಿದ ಮೊಟ್ಟೆ ನೀಡಲಿದ್ದು, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ನೀಡಲಾಗುವುದು. ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ ಸೇರಿ ರಾಜ್ಯದ 7 ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 -8 ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತದೆ.

6 ರಿಂದ 15 ವರ್ಷದ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಪೋಷಕಾಂಶಗಳ ನ್ಯೂನ್ಯತೆ ಅಧಿಕ ಮಟ್ಟದಲ್ಲಿರುವುದು ಕಂಡುಬಂದಿದ್ದು, ಒಂದರಿಂದ ಎಂಟನೇ ತರಗತಿಯವರೆಗೆ 14,44,322 ಮಕ್ಕಳು ಕಲಿಯುತ್ತಿದ್ದಾರೆ. ಈ ಮಕ್ಕಳಿಗೆ ಬಿಸಿಯೂಟದ ಜೊತೆಗೆ ತಿಂಗಳಿಗೆ 10 ರಿಂದ 12 ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ದಿನಬಿಟ್ಟು ದಿನ ನೀಡಲಾಗುವುದು. ಯೋಜನೆಗಾಗಿ ಕೇಂದ್ರ ಸರ್ಕಾರ ಶೇ. 60 ರಷ್ಟು ಮತ್ತು ರಾಜ್ಯ ಸರ್ಕಾರ ಶೇಕಡ 40 ರಷ್ಟು ಅನುದಾನ ನೀಡಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...