ಬೆಂಗಳೂರು: ಒಂದರಿಂದ ಹತ್ತನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ವಿತರಿಸಲಾಗುವುದು.
ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದ್ದಂತೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣು ನೀಡಲು 280 ಕೋಟಿ ರೂ.ಗೆ ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕಾರ್ಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕ್ಷೀರ ಭಾಗ್ಯ ಯೋಜನೆಗೆ 235.5 ಕೋಟಿ ರೂಪಾಯಿ, ಅಡುಗೆ ವೆಚ್ಚ ಕೇಂದ್ರದ ಪಾಲು 26.56 ಕೋಟಿ ರೂ., ರಾಜ್ಯದ ಪಾಲು 17.7 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದೊಂದಿಗೆ ಪೂರಕ ಪೌಷ್ಟಿಕಾಂಶ ರೂಪದಲ್ಲಿ ವಾರ್ಷಿಕ 80 ದಿನಗಳಿಗೆ ಅಂದಾಜು 60 ಲಕ್ಷ ಮಕ್ಕಳಿಗೆ ಈ ಯೋಜನೆಯ ಸೌಲಭ್ಯ ಸಿಗಲಿದೆ ಎಂದು ಹೇಳಲಾಗಿದೆ.