ಕೈರೋ: ಈಜಿಪ್ಟ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಸೇರಿದಂತೆ ಈಜಿಪ್ಟ್ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.
ಉಭಯ ರಾಷ್ಟ್ರಗಳು ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿವೆ. ಈಜಿಪ್ಟ್ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿ ಈಜಿಪ್ಟ್ ಗೆ ಭೇಟಿ ನೀಡಿದ್ದಾರೆ. 26 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಈಜಿಪ್ಟ್ ಗೆ ಪ್ರವಾಸ ಕೈಗೊಂಡ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಶನಿವಾರ ಮೋದಿ ಅವರನ್ನು ಈಜಿಪ್ಟ್‌ನ ಪ್ರಧಾನಿ ಮೊಸ್ತಫಾ ಮಡ್ ಬೌಲಿ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದು, ವಿಧ್ಯುಕ್ತ ಸ್ವಾಗತ ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು.
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಕೈರೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ‘ಆರ್ಡರ್ ಆಫ್ ದಿ ನೈಲ್’ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾಗಿದೆ.