alex Certify BIG NEWS : ಈದ್ ಮಿಲಾದ್ ಗಲಾಟೆ : ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಈದ್ ಮಿಲಾದ್ ಗಲಾಟೆ : ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡುವ ನಿಯೋಗ, ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲಿದೆ. ನಂತರ 11.15ಕ್ಕೆ ರಾಗಿಗುಡ್ಡಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಕಿಡಿಗೇಡಿಗಳು ಮನೆಗಳ ಮೇಲೆ, ಸಿಕ್ಕ ಸಿಕ್ಕವರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...