ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ.
ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರದರ್ಶನವಾಗದ ಕಾರಣ ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ.
ಮೇ 3 ರಂದು ರಂಜಾನ್ ನಿಗದಿಯಾಗಿತ್ತು. ರಾಜ್ಯದಲ್ಲಿ ಮೇ 2 ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಆದರೆ, ಚಂದ್ರದರ್ಶನವಾಗದ ಕಾರಣ ಸೋಮವಾರದ ಬದಲು ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ.
ಕೇರಳ ಮತ್ತು ಕರಾವಳಿ ಭಾಗದಲ್ಲಿಯೂ ಇಂದು ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಭಾರತದಾದ್ಯಂತ ಮಂಗಳವಾರವೇ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಲಾಗುವುದು.