ಮುಂಬೈ: ಕರ್ನಾಟಕ ಸರ್ಕಾರ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಹಾರಾಷ್ಟ್ರದ ಒಂದಿಂಚು ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಸಾಂಗ್ಲಿ ಜಿಲ್ಲೆಯ ಜತ್ ತಾಲ್ಲೂಕಿನ ಸಮಸ್ಯೆ ಬಗೆಹರಿಸಲಾಗುವುದು. ಮಾತುಕತೆ ಮೂಲಕ ಶಾಂತಿಯುತವಾಗಿ ಪರಿಹರಿಸಿಕೊಳ್ಳುತ್ತೇವೆ. ಮಹಾರಾಷ್ಟ್ರದ ಹಿಂದಿನ ಸರ್ಕಾರಗಳು ಸಮಸ್ಯೆ ಬಗೆಹರಿಸಿಲ್ಲ. ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದವನ್ನು ಪರಿಹರಿಸಿಲ್ಲ. ಆದರೆ, ನಮ್ಮ ಸರ್ಕಾರ ಎಲ್ಲಾ ಯೋಜನೆಗಳನ್ನು ಆರಂಭಿಸಿದೆ ಎಂದು ಹೇಳಿದ್ದಾರೆ.