ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಂಬೈನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವರು, ಬಾಳಾ ಸಾಹೇಬ್ ಠಾಕ್ರೆ ಹೆಸರಿನಲ್ಲಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮಹಾರಾಷ್ಟ್ರದ 20ನೇ ಮುಖ್ಯಮಂತ್ರಿಯಾಗಿ ಏಕನಾಥ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಕೋಶಿಯಾರಿ ಪ್ರಮಾಣವಚನ ಬೋಧಿಸಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು.