alex Certify ಪ್ರೀತಿಗೆ ವಯಸ್ಸಿನ ಹಂಗಿಲ್ಲ: ಮೆಟ್ರೋದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಲ್ಲಿ ಮಗ್ನರಾದ ವೃದ್ಧ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಗೆ ವಯಸ್ಸಿನ ಹಂಗಿಲ್ಲ: ಮೆಟ್ರೋದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಲ್ಲಿ ಮಗ್ನರಾದ ವೃದ್ಧ ದಂಪತಿ

ಪ್ರೀತಿಗೆ ವಯಸ್ಸಾಗುವುದಿಲ್ಲ ಎನ್ನುತ್ತಾರೆ. ಈ ಮಾತಿಗೆ ಅನ್ವರ್ಥ ಆಗುವಂತೆ ವಯಸ್ಸಾದ ದಂಪತಿ ಮೆಟ್ರೋದಲ್ಲಿ ಸೆಲ್ಫಿ ಕ್ಲಿಕ್ಕಿಸುವ ಸುಂದರವಾದ ವಿಡಿಯೋ ಒಂದು ವೈರಲ್​ ಆಗಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಲಾಗಿರುವ ಈ ವಿಡಿಯೋದಲ್ಲಿ ದಂಪತಿ ಸೆಲ್ಫಿ ಪಡೆಯಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದು. ಬೇರೆಯವರು ಏನೆಂದುಕೊಳ್ಳುತ್ತಾರೆ ಎಂಬ ಗೋಜಿಗೆ ಹೋಗದೇ ಅವರು ತಾಳ್ಮೆಯಿಂದ ಬಹು ಭಂಗಿಗಳಿಂದ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುವುದನ್ನು ವಿಡಿಯೋದಲ್ಲಿ ನೋಡಬಹುದು.

ಕೋಲ್ಕತ್ತಾ ಮೆಟ್ರೋದಲ್ಲಿ ಈ ವಿಡಿಯೋ ಸೆರೆಹಿಡಿಯಲಾಗಿದೆ ಎಂದು ಶೀರ್ಷಿಕೆಯಲ್ಲಿ ತಿಳಿಸಲಾಗಿದೆ. ತಾವು ಇಳಿಯುವ ಸ್ಟೇಷನ್​ ಬರುವವರೆಗೂ ಇವರು ವಿವಿಧ ಭಂಗಿಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ತಾವು ಬಯಸಿದಂತೆ ಫೋಟೋ ಬರುವವರಿಗೂ ಅವರು ಈ ಸಾಹಸ ಮಾಡಿದ್ದಾರೆ. ಈ ಸುಂದರ ವಿಡಿಯೋ 4.5 ಮಿಲಿಯನ್ ವೀಕ್ಷಣೆ ಗಳಿಸಿದೆ. ಇವರ ಹುಮ್ಮಸ್ಸಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...