alex Certify ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ವದಂತಿ ನಡುವೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ವದಂತಿ ನಡುವೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲವೆಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ. ಅವಧಿ ಮುಗಿದ ನಂತರವೇ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ ಆಧಾರದಲ್ಲಿಯೇ ಚುನಾವಣೆಯನ್ನು ಎದುರಿಸುತ್ತೇವೆ. ನಾವೇ ಗೆಲ್ಲುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಈಗ ಪಕ್ಷ ಹೇಗಿದೆಯೋ ಅದೇ ಸ್ಥಿತಿಯಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ. ಸಂಪುಟಕ್ಕೆ ಆಕಾಂಕ್ಷಿಗಳ ಸೇರ್ಪಡೆ ಮತ್ತು ಕೈಬಿಡುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ ಎಂದರು.

ಕೋಮು ಸಾಮರಸ್ಯ ಕದಡುವ ಬಗ್ಗೆ ಮಾತನಾಡಿದ ಅವರು, ನಾವು ಅಭಿವೃದ್ಧಿ ಕೆಲಸ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತೇವೆ. ಕಾಂಗ್ರೆಸ್ ನಮ್ಮ ಮೇಲೆ ವಿನಾಕಾರಣ ಆರೋಪ ಮಾಡುತ್ತಿದೆ. ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾಗಿದೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...