ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಅವರೊಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದ್ದು, ಹೈಕಮಾಂಡ್ ಅಧಿಕೃತ ಘೋಷಣೆ ಮಾಡಲಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬೆಳಗಾವಿ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನು ಶಿಫಾರಸು ಮಾಡಿದ್ದು, ಬಹುತೇಕ ಅವರ ಹೆಸರು ಅಂತಿಮವಾಗಲಿದೆ ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬೆಳಗಾವಿ ಉಪಚುನಾವಣೆಗೆ ಒಬ್ಬರ ಹೆಸರನ್ನು ಶಿಫಾರಸು ಮಾಡಲಾಗಿದ್ದು, ಶೀಘ್ರವೇ ಅಭ್ಯರ್ಥಿ ಹೆಸರು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.