ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರಚಾರ ಸಮಿತಿ ಮತ್ತು ಚುನಾವಣೆ ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ.
ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹತ್ವದ ಹೊಣೆಗಾರಿಕೆ ವಹಿಸಿದೆ. ಸಿಎಂ ಸಾರಥ್ಯದಲ್ಲಿಯೇ ಪ್ರಚಾರ ಸಮಿತಿ ರಚಿಸಲಾಗಿದ್ದು, ಸಮಿತಿ ಸದಸ್ಯರಾಗಿ ಬಿ.ಎಸ್. ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಆರ್. ಅಶೋಕ್, ಶಶಿಕಲಾ ಜೊಲ್ಲೆ, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಡಾ.ಕೆ. ಸುಧಾಕರ್, ಪ್ರಭು ಚೌಹಾಣ್, ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ವಿ. ಶ್ರೀನಿವಾಸ ಪ್ರಸಾದ್, ಪಿ.ಸಿ. ಮೋಹನ್, ಅರವಿಂದ ಲಿಂಬಾವಳಿ, ಲಕ್ಷ್ಮಣ ಸವದಿ, ರಮೇಶ್ ಜಾರಕಿಹೊಳಿ, ಬಿ.ವೈ. ವಿಜಯೇಂದ್ರ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಲಾಗಿದೆ.
ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಿದ್ದು, ಸದಸ್ಯರಾಗಿ ಭಗವಂತ ಖೂಬಾ, ಕೋಟ ಶ್ರೀನಿವಾಸ ಪೂಜಾರಿ, ಅರವಿಂದ ಲಿಂಬಾವಳಿ, ರಘುನಾಥರಾವ್ ಮಲ್ಕಾಪುರೆ, ನಿರ್ಮಲ್ ಕುಮಾರ್ ಸುರಾನಾ, ತೇಜಸ್ವಿನಿ ಅನಂತಕುಮಾರ್, ಎನ್. ರವಿಕುಮಾರ್, ಅಶ್ವತ್ಥ್ ನಾರಾಯಣ, ಮಹೇಶ್ ಟೆಂಗಿನಕಾಯಿ, ಎಸ್. ಕೇಶವ ಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ ಅವರನ್ನು ನೇಮಿಸಲಾಗಿದೆ.