alex Certify ಜಾರಕಿಹೊಳಿ ಬ್ರದರ್ಸ್ ಆಟಕ್ಕೆ ಮತ್ತೆ ಮುದುಡಿದ ಕಮಲ: ಸ್ಥಳೀಯ ಸಂಸ್ಥೆಯಲ್ಲೂ ಬಿಜೆಪಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾರಕಿಹೊಳಿ ಬ್ರದರ್ಸ್ ಆಟಕ್ಕೆ ಮತ್ತೆ ಮುದುಡಿದ ಕಮಲ: ಸ್ಥಳೀಯ ಸಂಸ್ಥೆಯಲ್ಲೂ ಬಿಜೆಪಿಗೆ ಬಿಗ್ ಶಾಕ್

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದ ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ ನೀಡಿದ್ದಾರೆ ಎನ್ನಲಾಗ್ತಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಕೆಎಂಎಫ್ ಅಧ್ಯಕ್ಷ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದಾರೆ.

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಲ್ಲೋಳಿಯಲ್ಲಿ ಅವಿರೋಧ ಆಯ್ಕೆಗೆ ಜಾರಕಿಹೊಳಿ ಸಹೋದರರು ಪ್ರಯತ್ನಿಸಿದ್ದರು. ಆದರೆ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಪಕ್ಷದಿಂದ ಬಿ ಫಾರಂ ಪಡೆದು ಎಲ್ಲ ಸ್ಥಾನಗಳಿಗೆ ತಮ್ಮ ಬೆಂಬಲಿಗ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು. ಕಲ್ಲೋಳಿ ಪಟ್ಟಣ ಪಂಚಾಯಿತಿ 16 ಸ್ಥಾನಗಳಲ್ಲಿ 13 ಸ್ಥಾನಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರು ಜಯಗಳಿಸಿದ್ದಾರೆ. ಬಿಜೆಪಿ ಟಿಕೆಟ್ ವಂಚಿತರಾಗಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಅಭ್ಯರ್ಥಿಗಳು ಬಾಲಚಂದ್ರ ಜಾರಕಿಹೊಳಿ ಅವರ ಫೋಟೋ ಬಳಸಿಕೊಂಡು ಗೆಲುವು ಸಾಧಿಸಿದ್ದಾರೆ.

ನಾಗನೂರ ಪಟ್ಟಣ ಪಂಚಾಯಿತಿ 17 ಸ್ಥಾನಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು ಎಲ್ಲಾ ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಯಾವ ಅಭ್ಯರ್ಥಿ ಸ್ಪರ್ಧಿಸದ ಹಿನ್ನೆಲೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಬೆಂಬಲಿಗರ ನಡುವೆಯೇ ಪೈಪೋಟಿ ನಡೆದಿತ್ತು.

ಅರಭಾವಿ ಪಟ್ಟಣ ಪಂಚಾಯಿತಿಯ 16 ವಾರ್ಡ್ ಗಳಲ್ಲಿ ಬಿಜೆಪಿ 6 ಸ್ಥಾನಗಳಲ್ಲಿ ಜಯಗಳಿಸಿದೆ. 10 ಸ್ಥಾನಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಬೆಂಬಲಿತ ಪಕ್ಷೇತರರು ಜಯಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...