ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಅಲೆ ಎಬ್ಬಿಸುವ ಉದ್ದೇಶದಿಂದ ಬಿಜೆಪಿ ಇಂದು ಮತ್ತು ನಾಳೆ ಮಹಾಪ್ರಚಾರ ಅಭಿಯಾನ ಕೈಗೊಂಡಿದೆ.
ಎಲ್ಲಾ 224 ಕ್ಷೇತ್ರಗಳಲ್ಲಿಯೂ ಪ್ರಚಾರ ಕೈಗೊಳ್ಳಲಾಗಿದ್ದು, ಕೇಂದ್ರ, ರಾಜ್ಯ ನಾಯಕರು ಹಾಗೂ ಜಿಲ್ಲಾ ಮಟ್ಟದ ನಾಯಕರು ಅಭಿಯಾನದಲ್ಲಿ ಭಾಗವಹಿಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. 224 ಕ್ಷೇತ್ರಗಳಲ್ಲಿಯೂ ಸಾರ್ವಜನಿಕ ಸಭೆ, ರೋಡ್ ಶೋ, ಮನೆ ಮನೆಗೆ ಭೇಟಿ ಸೇರಿದಂತೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಭಿಯಾನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ, ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನ್ಸುಕ್ ಮಾಂಡವಿಯಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬಿಜೆಪಿ ನಾಯಕರಾದ ಅರುಣ್ ಸಿಂಗ್, ಸಿ.ಟಿ. ರವಿ, ಅಣ್ನಾಮಲೈ ಸೇರಿದಂತೆ 98 ಕೇಂದ್ರ ನಾಯಕರು ಮತ್ತು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ರಾಜ್ಯದ 150 ನಾಯಕರು ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ವಿಶೇಷ ಮಹಾಪ್ರಚಾರ ಅಭಿಯಾನವನ್ನು ಮಂಗಳವಾರ ಮತ್ತು ಬುಧವಾರ ಹಮ್ಮಿಕೊಳ್ಳಲಾಗಿದೆ. ಎಲ್ಲ ಇನ್ನೂ 224 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಾಗುವುದು ಎಂದು ಹೇಳಿದ್ದಾರೆ.