ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ.
ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ಭರಾಟೆ ಮುಗಿಲುಮಟ್ಟಿದ್ದು, ಇಂದು ಸಂಜೆಗೆ ಅಂತ್ಯವಾಗಲಿದೆ. ಬುಧವಾರ ಈ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಕೊನೆ ಕ್ಷಣದಲ್ಲಿ ಮತದಾರರ ಸೆಳೆಯಲು ಅಬ್ಬರ ಪ್ರಚಾರ ಕೈಗೊಳ್ಳಲಾಗಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್, ಎನ್.ಡಿ.ಎ. ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಶಿಗ್ಗಾವಿಯಲ್ಲಿ ಎನ್.ಡಿ.ಎ.ಯಿಂದ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ್ ಕಣದಲ್ಲಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ, ಎನ್.ಡಿ.ಎ. ಅಭ್ಯರ್ಥಿಯಾಗಿ ಬಂಗಾರು ಲಕ್ಷ್ಮಣ್ ಸ್ಪರ್ಧಿಸಿದ್ದಾರೆ.
ಅಭ್ಯರ್ಥಿಗಳ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣದಲ್ಲಿ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಗಿದೆ. ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಬಳಿಕ ಮನೆ ಮನೆ ಪ್ರಚಾರ ಕೈಗೊಳ್ಳಲಿದ್ದಾರೆ.