ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಇದುವರೆಗೆ 302 ಕೋಟಿ ರೂಪಾಯಿ ಮೌಲ್ಯದ ಅಕ್ರಮ ನಗದು, ಮದ್ಯ, ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಘೋಷಣೆಯಾದಗಿನಿಂದ ಇದುವರೆಗೆ 302.78 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ, ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಕಳೆದ ಚುನಾವಣೆಯಲ್ಲಿ 115 ಕೋಟಿ ರೂಪಾಯಿ ಮೌಲ್ಯದ ನಗದು, ಮದ್ಯ, ಉಡುಗೊರೆ ವಶಕ್ಕೆ ಪಡೆಯಲಾಗಿತ್ತು. ಈ ಬಾರಿ 117 ಕೋಟಿ ರೂ. ಹೆಚ್ಚುವರಿ ನಗದು, ಮದ್ಯ, ವಸ್ತು ಜಪ್ತಿ ಮಾಡಲಾಗಿದೆ.
ಚುನಾವಣಾ ಆಯೋಗ, ಪೊಲೀಸ್ ಇಲಾಖೆ, ಐಟಿ ಇಲಾಖೆ, ಕಣ್ಗಾವಲು ಪಡೆ 109.14 ಕೋಟಿ ರೂಪಾಯಿ ಮೌಲ್ಯದ ನಗದು, 22.14 ಕೋಟಿ ರೂಪಾಯಿ ಮೌಲ್ಯದ ಉಡುಗೊರೆ, 70.70 ಮೌಲ್ಯದ ಮದ್ಯ, 18.29 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು, 76.05 ಕೋಟಿ ರೂಪಾಯಿ ಮೌಲ್ಯದ ಚಿನ್ನ, 4.44 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಶಕ್ಕೆ ಪಡೆಯಲಾಗಿದ್ದು, 2288 ಎಫ್ಐಆರ್ ದಾಖಲಿಸಲಾಗಿದೆ.