alex Certify BIG NEWS: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ: ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಇಲ್ಲ: ಸಿಎಂ ಬೊಮ್ಮಾಯಿ

ಮೈಸೂರು: ಗುಜರಾತ್ ನಲ್ಲಿ ಬಿಜೆಪಿ ದಾಖಲೆಯ ಜಯ ಸಾಧಿಸಿ ಸತತ 7ನೇ ಬಾರಿಗೆ ಅಧಿಕಾರಕ್ಕೇರಿದ್ದು, ರಾಜ್ಯದಲ್ಲಿಯೂ ಮತ್ತೆ ಅಧಿಕಾರಕ್ಕೆರಲು ಭಾರಿ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಗುಜರಾತ್ ಗೆಲುವಿನ ಹುಮ್ಮಸ್ಸಿನಲ್ಲಿದ್ದು, ಕರ್ನಾಟಕದಲ್ಲಿಯೂ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚರ್ಚೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ವದಂತಿಯನ್ನು ತಳ್ಳಿ ಹಾಕಿದ್ದಾರೆ. ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ, ಅಧಿಕಾರ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿಎಂ, ಅವಧಿ ಪೂರ್ವ ಚುನಾವಣೆಗೆ ಹೋಗ್ತೀರಾ ಎನ್ನುವ ಪ್ರಶ್ನೆಗೆ ಇಂಥವನೆಲ್ಲ ನಿಮಗೆ ಯಾರು ಹೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...