alex Certify ಉಪಚುನಾವಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳಿಗೆ ಖಡಕ್​ ಸೂಚನೆ ನೀಡಿದ ಚುನಾವಣಾ ಆಯೋಗ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪಚುನಾವಣೆ ಬೆನ್ನಲ್ಲೇ ರಾಜಕೀಯ ಪಕ್ಷಗಳಿಗೆ ಖಡಕ್​ ಸೂಚನೆ ನೀಡಿದ ಚುನಾವಣಾ ಆಯೋಗ….!

ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆ ಹಾಗೂ ಅದರ ಕೋವಿಡ್​ ಮಾರ್ಗಸೂಚಿಗಳು ಉಪಚುನಾವಣೆ ನಡೆಯುತ್ತಿರುವ ಜಿಲ್ಲೆ ಅಥವಾ ಕ್ಷೇತ್ರಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದೆ. ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರದ ಅಕ್ಕ ಪಕ್ಕದ ಏರಿಯಾಗಳಲ್ಲೂ ಬೈ ಎಲೆಕ್ಷನ್​ ಸಂಬಂಧಿಸಿದ ಯಾವುದೇ ರಾಜಕೀಯ ಚಟುವಟಿಕೆಗಳನ್ನು ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ನಡೆಸುವಂತಿಲ್ಲ ಎಂದು ಹೇಳಿದೆ.

15 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮೂರು ಸಂಸತ್​ ಸ್ಥಾನಗಳು ಹಾಗೂ 30 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್​​ 30ರಂದ ಉಪಚುನಾವಣೆ ನಡೆಯಲಿದೆ.

ಬಿಜೆಪಿ ಸಂಸದರ ಕೆಂಗಣ್ಣಿಗೆ ಗುರಿಯಾದ ಅಮೀರ್‌ ಖಾನ್‌ ಜಾಹೀರಾತು

ಉಪಚುನಾವಣೆ ಸಮಯದಲ್ಲಿ ಮಾದರಿ ಕೋಡ್​ ಜಾರಿಗೊಳಿಸುವ ಆಯೋಗವು ಉಪಚುನಾವಣೆಗೆ ಸಂಬಂಧಿಸಿದ ಕ್ಷೇತ್ರಗಳು ಹಾಗೂ ಜಿಲ್ಲೆಗಳಿಗೆ ಕೆಲ ಸೂಚನೆಗಳನ್ನು ನೀಡಿದೆ.

ಜಿಲ್ಲೆಗಳಲ್ಲಿ ಸಾಮಾನ್ಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಕ್ಷೇತ್ರವು ರಾಜ್ಯ ರಾಜಧಾನಿ, ಮಹಾನಗರ ಅಥವಾ ನಗರ ಪಾಲಿಕೆಗಳನ್ನು ಒಳಗೊಂಡಿದ್ದಲ್ಲಿ ಎಂಸಿಸಿ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ಕೆಲವು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಯು ಉಪಚುನಾವಣೆ ನಡೆಯುತ್ತಿರುವ ಜಿಲ್ಲೆ ಹಾಗೂ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವುದು ಆಯೋಗದ ಗಮನಕ್ಕೆ ಬಂದಿದೆ. ಇದು ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ.

ಮಿನುಗುವ ಮುಖ ಕಾಂತಿಗಾಗಿ ಹೀಗೆ ಮಾಡಿ

ಉಪಚುನಾವಣೆಗೆ ಸಂಬಂಧಿಸಿದ ಯಾವುದೇ ರಾಜಕೀಯ ಚಟುವಟಿಕೆಗಳನ್ನು ಜಿಲ್ಲೆಯೊಳಗೆ ಎಲ್ಲಾದರೂ ಆಯೋಜಿಸಿದ್ದರೆ ಇಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಆ ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...