ಲೋಕಸಭೆ ಚುನಾವಣೆ ಘೋಷಣೆಯೊಂದಿಗೆ ಮಾರ್ಚ್ 16 ರಂದು ಜಾರಿಗೆ ಬಂದಿದ್ದ ಮಾದರಿ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ.
ಸಾರ್ವತ್ರಿಕ ಲೋಕಸಭೆ ಚುನಾವಣೆ, ಅರುಣಾಚಲ ಪ್ರದೇಶ, ಸಿಕ್ಕಿಂ, ಒಡಿಶಾ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗಳ ಜೊತೆಗೆ ಕೆಲವು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳನ್ನು ಘೋಷಿಸಿದ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಗುರುವಾರ ನೀತಿ ಸಂಹಿತೆ ತೆರವುಗೊಳಿಸಲಾಗಿದ್ದು, ಇನ್ನು ಅಭಿವೃದ್ಧಿ ಕಾರ್ಯಗಳಿಗೆ ವೇಗ ಸಿಗಲಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ, ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿದ್ದರಿಂದ ಅಭಿವೃದ್ಧಿ ಯೋಜನೆಗಳು, ಕಚೇರಿ, ಇತರೆ ಕೆಲಸ ಕಾರ್ಯಗಳಿಗೆ ಹಿನ್ನಡೆಯಾಗಿತ್ತು. ಇನ್ನು ನೀತಿ ಸಂಹಿತೆ ತೆರವಾಗಿರುವುದರಿಂದ ಅಭಿವೃದ್ಧಿ ಸೇರಿ ಎಲ್ಲಾ ಕೆಲಸ ಕಾರ್ಯಗಳಿಗೆ ವೇಗ ಸಿಗಲಿದೆ.