alex Certify BIG NEWS: ಹೇಗೆ ನಡೆಯಲಿದೆ ನೂತನ ರಾಷ್ಟ್ರಪತಿ ಆಯ್ಕೆ…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೇಗೆ ನಡೆಯಲಿದೆ ನೂತನ ರಾಷ್ಟ್ರಪತಿ ಆಯ್ಕೆ…? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಚುನಾವಣಾ ಆಯೋಗ ಭಾರತದ 16 ನೇ ರಾಷ್ಟ್ರಪತಿಗಳ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 18 ರಂದು ಮತದಾನ ನಡೆಯಲಿದೆ.

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಜುಲೈ 18 ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಜೂನ್ 15 ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಇದೇ ತಿಂಗಳ 29 ಕೊನೆಯ ದಿನಾಂಕವಾಗಿದೆ. ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಮುಂದಿನ ತಿಂಗಳು 24 ರಂದು ಕೊನೆಗೊಳ್ಳಲಿದೆ.

ಸಂವಿಧಾನದ ಪ್ರಕಾರ ಅನುಪಾತದ ಪ್ರಾತಿನಿಧ್ಯದ ವ್ಯವಸ್ಥೆಗೆ ಅನುಗುಣವಾಗಿ ರಹಸ್ಯ ಮತದಾನದ ಮೂಲಕ ಚುನಾವಣೆ ನಡೆಸಲಾಗುವುದು. ಮುಕ್ತ ಮತ್ತು ನ್ಯಾಯಸಮ್ಮತ ಮತದಾನವನ್ನು ಖಚಿತಪಡಿಸಿಕೊಳ್ಳಲು ಆಯೋಗವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ರಾಜೀವ್ ಕುಮಾರ್ ಅವರು ಹೇಳಿದರು.

ಲೋಕಸಭೆ, ರಾಜ್ಯಸಭೆ ಮತ್ತು ರಾಜ್ಯ ವಿಧಾನಸಭೆಗಳ ಚುನಾಯಿತ ಸದಸ್ಯರು, ದೆಹಲಿ ಮತ್ತು ಪುದುಚೇರಿಯ ಶಾಸಕಾಂಗ ಸಭೆ ಸದಸ್ಯರು ರಾಷ್ಟ್ರಪತಿಗಳ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಸಂಸತ್ ಭವನ ಮತ್ತು ರಾಜ್ಯ ವಿಧಾನಸಭೆಗಳ ಆವರಣದಲ್ಲಿ ಮತದಾನ ನಡೆಯಲಿದೆ ಎಂದರು.

776 ಸಂಸತ್ ಸದಸ್ಯರು, 4,033 ವಿಧಾನಸಭಾ ಸದಸ್ಯರು ಸೇರಿದಂತೆ ಒಟ್ಟು 4,809 ಮತದಾರರು ಇರಲಿದ್ದಾರೆ. ಮತಗಳ ಒಟ್ಟು ಮೌಲ್ಯ 10 ಲಕ್ಷದ 86 ಸಾವಿರದ 431 ಆಗಿರುತ್ತದೆ. ಮತದಾನ ಮತ್ತು ಎಣಿಕೆಯ ದಿನದಂದು ಎಲ್ಲಾ ಕೋವಿಡ್ ಮುನ್ನೆಚ್ಚರಿಕೆಗಳು ಮತ್ತು ಪ್ರೋಟೋಕಾಲ್‌ ಗಳನ್ನು ಅನುಸರಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...