ಧಾರವಾಡ/ಬಾಗಲಕೋಟೆ: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಮೇಲೆ ಹಾಗೂ ಅಕ್ರಮ ಹಣ, ವಸ್ತು, ಮದ್ಯ ಸಗಾಟಗಳ ಮೇಲೆ ಚುನಾವಣಾ ಆಯೋಗ ತೀವ್ರ ನಿಗಾ ವಹಿಸಿದೆ. ಚೆಕ್ ಪೋಸ್ಟ್ ಗಳಲ್ಲಿ ನಾಕಾಬಂದಿಗಳನ್ನು ಹಾಕಲಾಗಿದ್ದು, ಚುನಾವಣಾ ಅಧಿಕಾರಿಗಳು, ಪೊಲೀಸರು ವಾಹನಗಳ ತಪಾಸಣೆ ನಡೆಸಿದ್ದಾರೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೊಂಡಿಕೊಪ್ಪ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ಮೌಲ್ಯದ 1536 ರೇಷ್ಮೆ ಸೀರೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಹುಬ್ಬಳ್ಳಿಯ ವಾಣಿಜ್ಯ ತೆರಿಗೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಇದೇ ವೇಳೆ ಬಾಗಲಕೋಟೆಯಲ್ಲಿ ್ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಬಾದಾಮಿ ತಾಲೂಕಿನಹಾಳಿ ಚೆಕ್ ಪೋಸ್ ನಲ್ಲಿ 2.90 ಲಕ್ಷ ರೂಪಾಯಿ ಹಣ ಹಾಗೂ 1 ಲಕ್ಷ ರೂಪಾಯಿಗೂ ಅಧಿಕ ಹಣ ಜಪ್ತಿ ಮಾಡಲಾಗಿದೆ. ಬಾಗಲಕೋಟೆಯಲ್ಲಿ ಒಟ್ಟು 3.90 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ.