ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದ್ದು, ಲೋಕಸಭೆ ಚುನಾವಣೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸೂಚನೆ ನೀಡಲಾಗಿದೆ.
ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದ್ದು, ಈಗಲೇ ತಂಡಗಳನ್ನು ರಚಿಸಿಕೊಳ್ಳುವಂತೆ ತಿಳಿಸಲಾಗಿದೆ. ಲೋಕಸಭೆ ಚುನಾವಣೆಗೆ ಪೂರಕವಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡು ಸಜ್ಜಾಗುವಂತೆ ಚುನಾವಣಾ ಆಯೋಗ ಕರೆ ನೀಡಿದೆ.