ನವದೆಹಲಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳ ಜಾಹೀರಾತು ನೀಡಿರುವುದನ್ನು ಕೇಂದ್ರ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಚುನಾವಣೆ ಸಂದರ್ಭದಲ್ಲಿ ನೆರೆ ರಾಜ್ಯಗಳಲ್ಲಿ ಜಾಹೀರಾತು ನೀಡುವುದು ಚುನಾವಣಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೊಗ ಹೇಳಿದೆ.
ಒಂದು ವಾರಗಳ ಒಳಗಾಗಿ ವಿವರಣೆ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ನೀಡಿದೆ.
ತೆಲಂಗಾಣ ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳನ್ನು ನೀಡಿದ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಯೊಗ ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.