
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮುಂದಿನ ವಾರ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
ದಸರಾ ಹಬ್ಬ ಮುಗಿಯುತಿದ್ದಂತೆ ಉಪಚುನಾವಣೆಯ ಕಾವು ಹೆಚ್ಚಾಗಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ, ವಿಧಾನಸಭಾ ಕ್ಷೇತ್ರಗಳಿಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಜೊತೆಗೆ ರಾಜ್ಯದಲ್ಲಿ ಉಪಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿಕೂಟದ ಮಧ್ಯೆ ಹಣಾಹಣಿಗೆ ವೇದಿಕೆ ಸಜ್ಜಾಗಲಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹಾವೇರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಬಸವರಾಜ ಬೊಮ್ಮಾಯಿ, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಈ. ತುಕಾರಾಂ ಅವರ ರಾಜೀನಾಮೆಯಿಂದಾಗಿ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳು ತೆರವಾಗಿದ್ದು, ಈ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.