alex Certify BIG BREAKING: ಮಾ. 22 ರಂದು ಬೆಳಗ್ಗೆ ಯುಗಾದಿ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾ. 22 ರಂದು ಬೆಳಗ್ಗೆ ಯುಗಾದಿ ದಿನವೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ನವದೆಹಲಿ: ಮಾರ್ಚ್ 22 ರಂದು ಬೆಳಿಗ್ಗೆ ಯುಗಾದಿ ಹಬ್ಬದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಮಾಡಲು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಯುಗಾದಿ ಹಬ್ಬದ ದಿನ ಮಾರ್ಚ್ 22ರಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ನಿರ್ಧರಿಸಲಾಗಿದೆ. ಇಂದಿನ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ 185 ಕ್ಷೇತ್ರಗಳ ಟಿಕೆಟ್ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದರಲ್ಲಿ 125 ಕ್ಷೇತ್ರಗಳ ಟಿಕೆಟ್ ಫೈನಲ್ ಮಾಡಲಾಗಿದ್ದು, ಮಾರ್ಚ್ 22 ರಂದು ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು.

ಮೊದಲ ಪಟ್ಟಿ ಬಿಡುಗಡೆಯಾದ ನಂತರ ಮತ್ತೊಮ್ಮೆ ಕೇಂದ್ರೀಯ ಚುನಾವಣೆ ಸಮಿತಿ ನಡೆಸಲಾಗುತ್ತದೆ. ಮಾರ್ಚ್ 25ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಹೀಗಾಗಿ ಮತ್ತೊಮ್ಮೆ ಸಭೆ ನಡೆಸಿ ಎರಡನೇ ಪಟ್ಟಿ ಸಿದ್ದಪಡಿಸುವಂತೆ ವರಿಷ್ಠರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಮುಂದಿನ ಸಭೆಯಲ್ಲಿ ಎರಡು ಹೆಸರುಗಳಿರುವ 35 ರಿಂದ 40 ಕ್ಷೇತ್ರಗಳ ಪಟ್ಟಿಯನ್ನು ಅಂತಿಮಗೊಳಿಸಲು ಎಐಸಿಸಿ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾರ್ಚ್ 22 ರಂದು ಬೆಳಿಗ್ಗೆ ಯುಗಾದಿ ಹಬ್ಬದ ದಿನ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...