alex Certify BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯ ವಿಧಾನಸಭೆಗೆ ಇದೇ ತಿಂಗಳ ಕೊನೆ ವಾರ ಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮಾರ್ಚ್ ಕೊನೆಯ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಮೇ ಎರಡನೇ ವಾರ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಚುನಾವಣಾ ಆಯೋಗದಿಂದ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿದೆ. ಮೇ 24ಕ್ಕೆ ವಿಧಾನಸಭೆ ಅವಧಿ ಅಂತ್ಯವಾಗಲಿದ್ದು, ಕಳೆದ ಬಾರಿ ಮೇ 12ರಂದು ಚುನಾವಣೆ ನಡೆದಿತ್ತು.

ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿ ಸಿದ್ಧತೆ ಪರಿಶೀಲಿಸಿದೆ. ಇದೇ ತಿಂಗಳ ಕೊನೆಯ ವಾರ ಅಥವಾ ಏಪ್ರಿಲ್ ಮೊದಲ ವಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ನಿರೀಕ್ಷೆ ಇದೆ. 2018ರ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ಆಯೋಗ ಸಿದ್ದತೆ ಮಾಡಿಕೊಂಡಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...