ಗದಗ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಮಲ್ಲಾಪುರ ಉಪ ವಿಭಾಗದ ಎಂ.ಆರ್.ಬಿ.ಸಿ. ಜೆಇ ಮಹೇಶ್ ಅವರನ್ನು ಅಮಾನತು ಮಾಡಲಾಗಿದೆ.
ಗದಗ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಅವರು ಜೆಇ ಮಹೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರೋಣ ವಿಧಾನಸಭಾ ಕ್ಷೇತ್ರದ ಪುರ್ತಿಗೇರಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕರ್ತವ್ಯಕ್ಕೆ ಮಹೇಶ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ಅವರು ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಈ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.