ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಹಿಂದುಳಿದ ವರ್ಗಗಳಿಗೆ ನಾಲ್ಕು ನಿಗಮಗಳನ್ನು ಸ್ಥಾಪನೆ ಮಾಡಲಾಗಿದೆ. ಒಂದೇ ದಿನ ನಾಲ್ಕು ನಿಗಮಗಳನ್ನು ಸರ್ಕಾರ ರಚನೆ ಮಾಡಿದೆ.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ, ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ, ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ, ಮಾಳಿ/ ಮಾಲಗಾರ ಸಮಾಜ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಈಡಿಗ, ಬಿಲ್ಲವ ಸೇರಿದಂತೆ 26 ಜಾತಿಗಳಿಗೆ ನಾರಾಯಣ ಗುರು ನಿಗಮ ಸ್ಥಾಪನೆ ಮಾಡಲಾಗಿದೆ. ಗಾಣಿಗ, ತೇಲಿ, ವನಿಯನ್, ಜ್ಯೋತಿನಗರ ವೈಶ್ಯರಿಗೆ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.
ಹಡಪದ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ.