
ರಾಯಚೂರು: ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಘೋಷಣೆ ಮಾಡಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು, ದೇವದುರ್ಗದಲ್ಲಿ ನಡೆದ ‘ದೇವೇಗೌಡರ ನಡೆ ಸ್ವಾಭಿಮಾನಿ ರೈತರ ಕಡೆ’ ಸಮಾವೇಶದಲ್ಲಿಯೂ ಈ ಬಗ್ಗೆ ಮಾತನಾಡಿ, ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ. ಮುಂದಿನ ಮೂರು ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭೆ ಉಪಚುನಾವಣೆ ನಡೆಯಲಿದ್ದು, ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿಲು ನಿರ್ಧರಿಸಲಾಗಿದೆ. ಹಣದ ಕೊರತೆ ಹಿನ್ನಲೆಯಲ್ಲಿ ಮೂರೂ ಉಪಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹಾಕುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ ಎಂದು ಗೌಡರು ಹೇಳಿದ್ದಾರೆ.