alex Certify ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್, ಕಚೇರಿಗಳಿಗೆ ರಜೆ ನೀಡಲಾಗಿದೆ.

ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ 4 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ, 19 ನಗರ ಸ್ಥಳೀಯ ಸಂಸ್ಥೆಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣ ಪಂಚಾಯಿತಿ, ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣ ಪಂಚಾಯಿತಿ, ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ, ಕಲಬುರಗಿ ಜಿಲ್ಲೆಯ ವಾಡಿ ಪುರಸಭೆಗೆ ಚುನಾವಣೆ ನಡೆಯಲಿದೆ.

ವಿವಿಧ ನಗರ ಸ್ಥಳೀಯ ಸಂಸ್ಥೆಗಳ 36 ವಾರ್ಡ್ ಗಳಿಗೆ ಉಪ ಚುನಾವಣೆ ನಿಗದಿಯಾಗಿದೆ. ಮತದಾನಕ್ಕೆ ಅನುಕೂಲವಾಗುವಂತೆ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ರಾಜ್ಯ ಸರ್ಕಾರಿ ಕಚೇರಿ, ಶಾಲಾ, ಕಾಲೇಜು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು, ದಿನಗೂಲಿ ನೌಕರರು, ಕಾಯಂ ನೌಕರರಿಗೆ ವೇತನ ಸಹಿತ ರಜೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...