alex Certify ಸಭಾಪತಿ ಚುನಾವಣೆ: ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಭಾಪತಿ ಚುನಾವಣೆ: ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.

ಜೆಡಿಎಸ್ ಪಕ್ಷದ ವಿಧಾನಪರಿಷತ್ ಮುಖ್ಯಸಚೇತಕ ಎನ್. ಅಪ್ಪಾಜಿಗೌಡ ಅವರು ನಾಳೆ ಸದನದಲ್ಲಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿದ್ದಾರೆ. ಅಧಿವೇಶನ ಮುಗಿಯುವವರೆಗೂ ಕಲಾಪಗಳಲ್ಲಿ ಸದಸ್ಯರು ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್ ಗೆ ನೀಡಲಾಗಿದ್ದು, ಉಪ ಸಭಾಪತಿ ಸ್ಥಾನ ಬಿಜೆಪಿಗೆ ನೀಡಲಾಗಿದೆ. ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ನಾಳೆ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...