ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಭರವಸೆ ಒಳಗೊಂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕೇಂದ್ರದಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಯುವ ನ್ಯಾಯ, ಮಹಿಳಾ ನ್ಯಾಯ, ರೈತ ನ್ಯಾಯ, ಕಾರ್ಮಿಕ ನ್ಯಾಯ, ಸಮಾನ ನ್ಯಾಯ ಒಳಗೊಂಡ ಪಂಚ ನ್ಯಾಯ ಆಧರಿತ ಭರವಸೆ ನೀಡಲಾಗಿದೆ.
45 ಪುಟಗಳ ಪ್ರಣಾಳಿಕೆಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ನಾಯಕ ರಾಹುಲ್ ಗಾಂಧಿ, ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇದ್ದರು.
ಪ್ರತಿ ತಾಲೂಕಿನಲ್ಲಿ ಒಂದು ಸರ್ಕಾರಿ ಸಮುದಾಯ ಕಾಲೇಜು, ಅಗ್ನಿಪಥ್ ಯೋಜನೆ ರದ್ದು, ಒಟ್ಟು ಮೀಸಲಾತಿ ಪ್ರಮಾಣ ಶೇಕಡ 50ಕ್ಕಿಂತಲೂ ಹೆಚ್ಚಳ ಮಾಡಲು ಸಂವಿಧಾನಕ್ಕೆ ತಿದ್ದುಪಡಿ, ಎಲೆಕ್ಷನ್ ಬಾಂಡ್, ಪಿಎಂ ಕೇರ್ಸ್ ಅವ್ಯವಹಾರ ಆರೋಪದ ಬಗ್ಗೆ ತನಿಖೆ, ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಸೇರಿದಂತೆ ಹಲವು ಭರವಸೆ ನೀಡಲಾಗಿದೆ.