ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಡಲಾಗಿದ್ದು, ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ 50 ಲಕ್ಷ ರೂಪಾಯಿ ಸಂಗ್ರಹಿಸಿಟ್ಟಿದ್ದ ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ಹಣ ವಶಕ್ಕೆ ಪಡೆದುಕೊಂಡು ಚುನಾವಣಾ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಹೆಚ್.ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.