
ಮೈಸೂರು: ಸಂಸದೆ ಸುಮಲತಾ ಅಂಬರೀಶ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ನಗರದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇನೆ. ವಿಧಾನಸಭೆಗೆ ಚುನಾವಣೆಗೆ ನಿಲ್ಲುವಂತೆ ಎಲ್ಲರೂ ನನ್ನನ್ನು ಕೇಳುತ್ತಿದ್ದಾರೆ. ನಾನು ಇದುವರೆಗೂ ತಟಸ್ಥಳಾಗಿ ಇದ್ದೇನೆ ಎಂದರು.
ಅಂಬರೀಶ್ ಬೆಂಬಲಿಗರು ಸಭೆ ನಡೆಸಿರುವ ಬಗ್ಗೆ ನನಗೆ ಗೊತ್ತಿಲ್ಲ. ನಾನು ಚುನಾವಣೆಗೆ ಬಂದಿದ್ದೆ ಆಕಸ್ಮಿಕ. ಮಂಡ್ಯ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಒಲವು ಇದೆ. ಪುತ್ರ ಅಭಿಷೇಕ್ ಚುನಾವಣೆಗೆ ಸ್ಪರ್ಧೆ ಮಾಡುವುದು ಅವನಿಗೆ ಬಿಟ್ಟದ್ದು. ಹಣೆಬರಹ ಯಾವ ರೀತಿ ಇರುತ್ತದೆಯೋ ಆ ರೀತಿ ಆಗುತ್ತೆ ಎಂದು ಹೇಳಿದ್ದಾರೆ.