
ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನಲೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪ ಶ್ರೀರಾಮಪುರದಲ್ಲಿ ನಿಖಿಲ್ ಅಭಿಮಾನಿ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತ ಮಂಜುನಾಥ ಅಲಿಯಾಸ್ ಅಭಿ(35) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ತರಾಗಿರುವ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.