alex Certify BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಈ ಬಾರಿ ಆನ್ ಲೈನಲ್ಲಿಯೂ ಸಲ್ಲಿಕೆಗೆ ಅವಕಾಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ಅಧಿಸೂಚನೆ ಪ್ರಕಟವಾಗಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.

ಏಪ್ರಿಲ್ 20 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದ್ದು, ಈ ಬಾರಿ ಆನ್ಲೈನ್ ನಲ್ಲಿಯೂ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಬಹುದು.

ಮೇ 10 ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಆಯೋಗ ಇಂದು ಅಧಿಸೂಚನೆ ಹೊರಡಿಸಲಿದೆ. ಪ್ರತಿ ವಿಧಾನಸಭೆ ಕ್ಷೇತ್ರದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...