
ಬೆಂಗಳೂರು: ಲೋಕಸಭೆ ಚುನಾವಣೆ ಕರ್ತವ್ಯದ ವೇಳೆಯಲ್ಲೇ ಇಬ್ಬರು ಅಧಿಕಾರಿಗಳು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೀದರ್ ನ ನಿರ್ಣಾ ಗ್ರಾಮದಲ್ಲಿ ರೈತ ಸಂಪರ್ಕ ಕಚೇರಿಯಲ್ಲಿ ಸಹಾಯಕ ಅಧಿಕಾರಿಯಾಗಿದ್ದ ಆನಂದ(32) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕರ್ತವ್ಯದ ಸಂದರ್ಭ ಕೋಡಂಬಲ್ ಚೆಕ್ ಪೋಸ್ಟ್ ನಲ್ಲಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದ ಅವರನ್ನು ಸಿಪಿಐ ಶ್ರೀನಿವಾಸ ಅಲ್ಲಾಪುರೆ ಅವರು ಹಮನಾಬಾದ್ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಚುನಾವನೆ ಕರ್ತವ್ಯದಲ್ಲಿದ್ದ ಜಮಖಂಡಿ ತಾಲೂಕಿನ ಬಿದರಿ ಪ್ರಾಥಮಿಕ ಶಾಲೆ ಶಿಕ್ಷಕ ಗೋವಿಂದಪ್ಪ ಸಿದ್ದಾಪುರ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.