ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ.
ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂಪಾಯಿಯಷ್ಟು ಇದೆ. ಡೀಸೆಲ್ ಮೇಲಿನ ಅಂಡರ್ ರಿಕವರಿ 10 ರೂಪಾಯಿಯಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.
ಮೇ 22 ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರೂಪಾಯಿ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6 ರೂಪಾಯಿ ಕಡಿತಗೊಳಿಸಿದ್ದು, ನಂತರದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆ ಮತ್ತು ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಸಮೀಪದಲ್ಲಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಬಹುದು ಎಂದು ಹೇಳಲಾಗಿದೆ.