alex Certify ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಸಿಹಿ ಸುದ್ದಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

 ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕುಸಿತವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎರಡು ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ.

ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂಪಾಯಿಯಷ್ಟು ಇದೆ. ಡೀಸೆಲ್ ಮೇಲಿನ ಅಂಡರ್ ರಿಕವರಿ 10 ರೂಪಾಯಿಯಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.

ಮೇ 22 ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 8 ರೂಪಾಯಿ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 6 ರೂಪಾಯಿ ಕಡಿತಗೊಳಿಸಿದ್ದು, ನಂತರದಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆ ಮತ್ತು ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಸಮೀಪದಲ್ಲಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...