ಬೆಂಗಳೂರು: ನಾವು ಸೀಮಿತವಾದ ಚೌಕಟ್ಟಿನಲ್ಲಿ ನಮ್ಮನ್ನು ಕಟ್ಟಿ ಹಾಕಿಕೊಂಡಿದ್ದೇವೆ. ಸೃಷ್ಟಿಯ ಸತ್ಯ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳುತ್ತಾ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಣ್ಣೀರಿಟ್ಟ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್ ಕಾಗೇರಿ, ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ಮಾತನಾಡುತ್ತಾ ಬ್ರಿಟಿಷ್ ಶಿಕ್ಷಣ ಪದ್ಧತಿಯಿಂದಾಗಿ ನಮಗೆ ಜೀವನದ ಕಲ್ಪನೆಗಳು, ಸಾರ್ಥಕತೆಯ ಭಾವನೆ ಇಲ್ಲದಂತಾಗಿದೆ. ನಾವು ಸೀಮಿತ ಚೌಕಟ್ಟಿನಲ್ಲಿ ಕಟ್ಟಿಹಾಕಿಕೊಳ್ಳುತ್ತಿದ್ದೇವೆ. ಸೃಷ್ಟಿಯ ಸತ್ಯ ಅರಿತುಕೊಳ್ಳಬೇಕಾದ ಅಗತ್ಯವಿದೆ. ನಂಬಿಕೆ, ವಿಶ್ವಾಸ ಬರದೇ ಹೋದಲ್ಲಿ ವ್ಯವಸ್ಥೆ ನಡೆಸಲು ಸಾಧ್ಯವಿಲ್ಲ ಎಂದರು.
2024ರ ವೇಳೆಗೆ ಕೃಷಿಯಲ್ಲಿ ಶೂನ್ಯ ಡೀಸೆಲ್ ಬಳಕೆ: ಕೇಂದ್ರ ಸರ್ಕಾರದ ಮಹತ್ವದ ಗುರಿ
ಸಮಾಜದ ಯಾವ ವ್ಯವಸ್ಥೆಯಲ್ಲಿ ನಾವು ಇದ್ದೇವೋ ಅದನ್ನು ಸರಿಯಾಗಿ ನಡೆಸಬೇಕಾದರೆ ನಮ್ಮ ಜ್ಞಾನ ವಿಸ್ತಾರಗೊಳಿಸಿಕೊಳ್ಳುವ ಪ್ರಯತ್ನವಾಗಬೇಕು ಎಂದು ಹೇಳುತ್ತಾ ಭಾವುಕರಾದ ಕಾಗೇರಿ ಕೆಲ ಕಾಲ ಕಣ್ಣೀರಾದರು. ಬಳಿಕ ಅಂತಹ ಒಳ್ಳೆಯ ಪ್ರಯತ್ನಗಳನ್ನು ನಾವೆಲ್ಲರೂ ಮಾಡೋಣ ಎಂದು ಹೇಳಿ ಸುದ್ದಿಗೋಷ್ಠಿ ಮುಗಿಸಿ ತೆರಳಿದ್ದಾರೆ.