
ನವದೆಹಲಿ: ವಿವಿಧ ರಾಜ್ಯಗಳ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಪ್ರದೇಶದಲ್ಲಿ 16 ಕ್ಷೇತ್ರ ಗುಜರಾತ್ ನಲ್ಲಿ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಪಕ್ಷ ಒಂದು ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. ಮಣಿಪುರದಲ್ಲಿ 1, ಉತ್ತರ ಪ್ರದೇಶದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದು ಕೊಂಡಿದೆ..
ಮಧ್ಯ ಪ್ರದೇಶದ 28 ಕ್ಷೇತ್ರಗಳಲ್ಲಿ 16 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಗಳಿಸಿದ್ದು, 12 ಸಚಿವರ ಭವಿಷ್ಯ ನಿರ್ಧಾರವಾಗಲಿದೆ.