
ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ 579 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಬಸವನಗೌಡ ತುರುವಿಹಾಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ 1136, ಬಿಜೆಪಿಗೆ 745 ಮತಗಳು ಬಂದಿವೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ 1070 ಮತ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 684 ಮತ ಗಳಿಸಿದ್ದಾರೆ.