
ಬೆಳಗಾವಿ ಲೋಕಸಭೆ ಉಪಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳ ಅಂಗಡಿ ಮುನ್ನಡೆ ಗಳಿಸಿದ್ದಾರೆ. ಇವಿಎಂ ಮತಎಣಿಕೆ ಕೂಡ ಆರಂಭವಾಗಿದೆ.
ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಂಚೆ ಮತಗಳ ಎಣಿಕೆ ನಡೆದಿದ್ದು, ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.