alex Certify ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು –ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ –ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ, ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

247 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ. ರಾಜ್ಯದಲ್ಲಿ ಮೊದಲ ಹಂತ ಮತ್ತು ದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಇಂದು ನಡೆದಿದೆ. ಜೂನ್ 4ರ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...