
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದ್ದು, 226 ಪುರುಷ ಅಭ್ಯರ್ಥಿಗಳು, 21 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ 14, ಬಿಜೆಪಿ 11, ಜೆಡಿಎಸ್ 3, ಬಿಎಸ್ಪಿ 12 ಸೇರಿದಂತೆ 247 ಅಭ್ಯರ್ಥಿಗಳ ಹಣೆಬರಹ ಇಂದು ನಿರ್ಧಾರವಾಗಲಿದೆ.
2.88 ಕೋಟಿ ಜನರು ಮತದಾನ ಮಾಡಲಿದ್ದಾರೆ. ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಆಯೋಗ ಸಜ್ಜಾಗಿದೆ. ರಾಜ್ಯದ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಾಮರಾಜನಗರ, ಉಡುಪಿ- ಚಿಕ್ಕಮಗಳೂರು, ಮೈಸೂರು -ಕೊಡಗು ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.